ಉತ್ತರಕನ್ನಡ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುರುವಾರ ಸಂಜೆ ನಡೆದಿದೆ.
ಕಿರವತ್ತಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಗುರುತಿನ್ನೂ ಪತ್ತೆಯಾಗಿಲ್ಲ. ಮೃತರು ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಎಂದು ತಿಳಿದುಬಂದಿದೆ.
ಕಾರು ದೆಹಲಿ ನೋಂದಣಿಯನ್ನು ಹೊಂದಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಯಲ್ಲಾಪುರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
Laxmi News 24×7