ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ.
ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಸಂಗೀತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
Laxmi News 24×7