Breaking News

ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಜನಾಧಿಕಾರ ಸಂಘರ್ಷ ಪರಿಷತ್ ದೂರು ಸಲ್ಲಿಸಿದ್ದಾರೆ.

Spread the love

ಬೆಂಗಳೂರು : ಕಮಿಷನ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಜನಾಧಿಕಾರ ಸಂಘರ್ಷ ಪರಿಷತ್ ದೂರು ಸಲ್ಲಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಚಯ ನಿರ್ಮಾಣ ಕಂಪೆನಿಯಿಂದ ಬಿ.ವೈ.ವಿಜಯೇಂದ್ರ ಕೋಟ್ಯಂತರ ರೂಪಾಯಿ ಕಮಿಷನ್ ಪಡೆದಿದ್ದಾರೆಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಈ ದೂರು ನೀಡಲಾಗಿದೆ.

ವಸತಿ ಸಮುಚ್ಚಯ ನಿರ್ಮಾಣದ ರಾಮಲಿಂಗಂ ಕನ್ವಕ್ಷನ್ಸ್ ಕಂಪೆನಿಯಿಂದ ನಗದು ಮತ್ತು ಆರ್‍ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿದೆ ಎಂದು ದೂರಲಾಗಿದೆ.

ಈ ಪ್ರಕರಣದಲ್ಲಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ ದಾಖಲು ಮಾಡಿ ತನಿಖೆ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ