Breaking News

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ

Spread the love

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ನಡೆದಿದೆ.

ಮಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ಪಲ್ಟಿಯಾಗಿದೆ. ಪರಿಣಾಮ ಹೆದ್ದಾರಿಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದಿದ್ದು, ಟ್ಯಾಂಕರಿನಲ್ಲಿದ್ದ ಗ್ಯಾಸ್ ಸೋರಿಕೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ. ನಂತರ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಸ್ಥಳೀಯರನ್ನ ಹತ್ತಿರಕ್ಕೆ ತೆರಳದಂತೆ ಪೊಲೀಸರು ತಡೆದಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ