Breaking News

ಡ್ರಗ್ಸ್ ಪ್ರಕರಣ- ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೊಣೆ

Spread the love

ಮುಂಬೈ: ಬಾಲಿವುಡ್ ವುಡ್ ನಲ್ಲಿ ಕೂಡ ಡ್ರಗ್ಸ್ ಪ್ರಕರಣ ದಿನೇ ದಿನೇ ಹೊಸ ರೂಪವನ್ನು ಪಡೆದುಕೊಳ್ಳುತ್ತಿದ್ದು, ಇದೀಗ ನಟಿ ದೀಪಿಕಾ ಪಡುಕೊಣೆ ಅವರು ಎನ್‍ಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಬೆಳಗ್ಗೆ 9.45ರ ಸುಮಾರಿಗೆ ದೀಪಿಕಾ ಅವರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್‍ಸಿಬಿ) ಕಚೇರಿ ತಲುಪಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ದೀಪಿಕಾ ಜೊತೆ ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ದೀಪಿಕಾ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ಕೂಡ ವಿಚಾರಣೆ ಎದುರಿಸಲಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಮೂವರು ನಟಿಯರಿಗೆ ಎನ್‍ಸಿಬಿ ಬುಧವಾರವೇ ನೋಟಿಸ್ ನೀಡಿತ್ತು. ದೀಪಿಕಾ ಅವರ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ನಿನ್ನೆ ಕೂಡ ವಿಚಾರಣೆ ಎದುರಿಸಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಾಗಲೇ ಡ್ರಗ್ಸ್ ದಂಧೆ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದ್ದು, ಸುಶಾಂತ್ ಸಿಂಗ್ ರಜಪೂತ್ ಪ್ರಿಯತಮೆ, ನಟಿ ರಿಯಾ ಚಕ್ರವರ್ತಿ ಹಾಗೂ ಇತರ ಡ್ರಗ್ ಪೆಡ್ಲರ್ ಗಳನ್ನು ವಿಚಾರಣೆ ನಡೆಸುತ್ತಿದ್ದಾಗ ಬಾಲಿವುಡ್‍ನ ಹಲವು ನಟ, ನಟಿಯರು ಹಾಗೂ ನಿರ್ಮಾಪಕರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಈಗಾಗಲೇ ಹತ್ತಾರು ನಟಿಯರನ್ನು ವಿಚಾರಣೆ ನಡೆಸಿದೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ