ಬೆಂಗಳೂರು: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ಶರಣ್ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೆಚ್ ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶರಣ್ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿರ್ದೇಶಕ ಸಿಂಪಲ್ ಸುನಿ ಮತ್ತು ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಚಿತ್ರದಲ್ಲಿ ಶರಣ್ ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ. ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿದ್ದು, ಕೋವಿಡ್ 19 ಪರಿಣಾಮ ಇದರ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರದ ಮಾರ್ಗ ಸೂಚಿಯ ಅನ್ವಯ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಲ್ಲಿ ತೊಡಗಿಕೊಂಡಿತ್ತು.
Laxmi News 24×7