Breaking News

ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ

Spread the love

ಬೆಂಗಳೂರು : ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಸಿ. ಟಿ.ರವಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡ ನೇಮಕ ಮಾಡಿ ಆದೇಶ ಜಾರಿ ಮಾಡಿದ್ದಾರೆ. ಈ ಮೂಲಕ ಸಚಿವ ಸಿಟಿ ರವಿಯವರು ರಾಜ್ಯವಲ್ಲದೇ ರಾಷ್ಟ್ರೀಯ ರಾಜಕೀಯಕ್ಕೂ ಪಾದಾರ್ಪಣೆ ಮಾಡಿದಂತೆ ಆಗಿದೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷದ ಸೂತ್ರದಂತೆ ಒಬ್ಬರಿಗೆ ಒಂದೇ ಸ್ಥಾನ ಎಂಬ ನಿಲುವಿನಂತೆ ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ ನೀಡುವುದು ಕೂಡ ಅನಿವಾರ್ಯವಾಗಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ಸಿಟಿ ರವಿ ಅವರು ರಾಜೀನಾಮೆ ನೀಡುತ್ತಾ ಎಂಬುದು ಇದೀಗ ತೀವ್ರ ಕುತೂಹಲ ಮೂಡಿಸಿದೆ.ಬಿಜೆಪಿಯಿಂದ ಇಂದು ವಿವಿಧ ಹುದ್ದೆಗಳಿಗೆ ವಿವಿಧ ರಾಜ್ಯಗಳ ಬಿಜೆಪಿ ಮುಖಂಡರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶಿಸಿದ್ದಾರೆ.ಇಂತಹ ಆದೇಶದಲ್ಲಿ ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದರೇ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿಟಿ ರವಿ ಅವರನ್ನು ನೇಮಕ ಮಾಡಲಾಗಿದೆ.ಸಚಿವ ಸಿಟಿ ರವಿಯ ಈ ನೇಮಕದಿಂದಾಗಿ ಅವರು ರಾಷ್ಟ್ರೀಯ ರಾಜಕೀಯ ‘ ಪಾದಾರ್ಪಣೆ ‘ ಮಾಡಲು ರಂಗ ಸಜ್ಜಾಗಿದೆ ಎಂದು ಭಾವಿಸಬೇಕಾಗಿದೆ.
ಒಬ್ಬರಿಗೆ ಒಂದೇ ಸ್ಥಾನ ಎಂಬುದು ಬಿಜೆಪಿಯ ಸೂತ್ರ. ಇದರ ಪ್ರಕಾರ ಸಚಿವ ಸ್ಥಾನಕ್ಕೆ ರವಿ ರಾಜೀನಾಮೆ ನೀಡುವುದು ಅನಿವಾರ್ಯ ಆಗಿದೆ. ಈ ಹಿನ್ನಲೆಯಲ್ಲಿ ಸಚಿವ ಸಿಟಿ ರವಿಯವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೇ? ಎಂಬ ಪ್ರಶ್ನೆ ಉದ್ಬವಿಸಿದೆ. ಆ ಬಗ್ಗೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ