Breaking News

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

Spread the love

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ.

ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಾಧುಸ್ವಾಮಿ, ಈ ಕುರಿತು ಸಿಎಂಗಳೊಂದಿಗೆ ಚರ್ಚಿಸುತ್ತೇನೆ. ಶಿಕ್ಷಕರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದ್ದು, ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ