Breaking News

ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

Spread the love

ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.

ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ ಕೆಲಸ ಮಾಡಲಿಲ್ಲ ಎನ್ನುವ ಆರೋಪವಿದೆ. ಆದರೆ ರೈಲ್ವೆ ಖಾತೆ ಸಚಿವರಾದ ನಂತರ ಅವರು ಹಳೆಯದನ್ನೆಲ್ಲ ಮರೆಸುವ ರೀತಿಯಲ್ಲಿ ಕೆಲಸ ಮಾಡಿದ್ದರು ಎಂಬ ಮಾತುಗಳು ಕೇಳಿ ಬಂದಿದೆ.

ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಹಾಗೂ ಕರ್ನಾಟಕ ರಾಜ್ಯಕ್ಕೂ ರೈಲ್ವೆಯಲ್ಲಿ ಅಪಾರ ಕೊಡುಗೆ ನೀಡಿದ್ದಾರೆ.ಮುಂದಿನ ದಿನಗಳಲ್ಲಿ ಈ ಭಾಗದ ದಶಕಗಳ ಇನ್ನಷ್ಟು ಕನಸುಗಳು ನನಸಾಗುವ ನಿರೀಕ್ಷೆಯನ್ನು ಮೂಡಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ