Breaking News

ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ತೇಜಸ್ವಿ ಸೂರ್ಯ

Spread the love

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಿದರು.

ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್​ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್​ಗಳನ್ನು ಎನ್​ಐಎ ವಿಫಲಗೊಳಿಸಿದೆ. ಹೀಗಾಗಿ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರನ್ನು ಆಗ್ರಹಿಸಿದ್ದೆ. ಮನವಿಯನ್ನೂ ಮಾಡಿದ್ದೆ ಎಂದು ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಬಿಗ್ ಚೇಂಜ್: ರಾಜ್ಯ ನಾಯಕರಿಗೆ ಹೈಕಮಾಂಡ್ ಭರ್ಜರಿ ಗಿಫ್ಟ್

ಮನವಿ ಸ್ವೀಕರಿಸಿರುವ ಗೃಹ ಸಚಿವ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ಶೀಘ್ರವೇ ಎನ್​ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿದೆ ಎಂಬ ಭರವಸೆಯನ್ನೂ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ