ಮಡಿಕೇರಿ: ಅಂತಾರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ಎಸ್.ಕೆ.ಉತ್ತಪ್ಪ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್‍ವೊಂದರಲ್ಲಿ ಸರಳವಾಗಿ ಕೇವಲ ಬೆರಳೆಣಿಕೆಯಷ್ಟು ಕುಟುಂಬ ಸದಸ್ಯ ಒಳಗೊಂಡು ಮದುವೆ ಕಾರ್ಯಕ್ರಮ ನಡೆದಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಕೊಡಗಿನ ಮೂಲದ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಈ ಜೋಡಿ ಹಸೆಮಣೆಯೇರಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದ್ದು, ಕುಟುಂಬದವರು ಮತ್ತು ಬಂಧುಗಳಿಗೆ ಮಾತ್ರ ಮದುವೆಗೆ ಆಹ್ವಾನಿಸಲಾಗಿದೆ. ಎಸ್.ಕೆ ಉತ್ತಪ್ಪ ಏಕಲವ್ಯ ಪ್ರಶಸ್ತಿ ವಿಜೇತರಾಗಿದ್ದಾರೆ. ಹಾಗೂ 164 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
Laxmi News 24×7