Breaking News

ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ

Spread the love

ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,  ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. ಹೀಗಾಗಿ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಮಾತನಾಡಲಿದ್ದಾರೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಮಾತನಾಡಿ, ಬೆಂಬಲ ಸೂಚಿಸಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ