ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆನಗರ್‍ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್‍ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ ಆಗ್ರಹಿಸಿದರು.
ತಮ್ಮ ಪುತ್ರಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಮಾರಕ ಹಲ್ಲೆ ಕೃತ್ಯವನ್ನು ಪ್ರತಿಭಟಿಸಿದ ಉತ್ತರ ಪ್ರದೇಶದ ಉನ್ನಾವೋ ಗ್ರಾಮದ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಗಿತ್ತು. 2018, ಏ.29ರಂದು ಪೊಲೀಸ್ ಕಸ್ಟಡಿಯಲ್ಲಿ ಅವರು ಮೃತಪಟ್ಟಿದ್ದರು. ಈ ಪ್ರಕರಣ ಉತ್ತರಪ್ರದೇಶಾದ್ಯಂತ ಭಾರೀ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಯಿತು.
Laxmi News 24×7