Breaking News

ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಹೆಚ್.ಕೆ. ಪಾಟೀಲ್, ನಾನು ಕೊರೊನಾ ತಪಾಸಣೆಗೆ ಒಳಗಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ತಾವು ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ.ರೋಗದ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷತೆಯ ದೃಷ್ಟಿಯಿಂದ ಮನೆಯಲ್ಲೇ ಉಳಿದುಕೊಳ್ಳುತ್ತೇನೆ. ಆದಷ್ಟು ಶೀಘ್ರ ಗುಣಮುಖನಾಗಿ ಸೇವೆಗೆ ಹಿಂದಿರುಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ