ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ.
ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ ಮಗಳು ಐರಾ ಮತ್ತು ಸಹೋದರನ ಮಗಳಿಗೆ ಸೋಶಿಯಲ್ ಮೀಡಿಯಾದ ಮೂಲಕ ವಿಶ್ ಮಾಡಿದ್ದಾರೆ.
ಹೆಣ್ಣು ಮಕ್ಕಳು ನಮಗೆ ಯಾವಾಗಲೂ ಅತ್ಯುತ್ತಮ ಸ್ನೇಹಿತರು. ನಿನ್ನೆ ಮಗಳ ದಿನ ಎಂದು ನಾನು ನಂಬಿದ್ದೇನೆ. ಹೀಗಾಗಿ ಎಲ್ಲಾ ಹೆಣ್ಣು ಮಕ್ಕಳಿಗೆ ಮಗಳ ದಿನಾಚರಣೆಯ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ. ಮಗಳು ಐರಾ ಜೊತೆ ಬೀಚ್ ಚೇರ್ ಮೇಲೆ ಮಲಗಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ರಾಧಿಕಾ ಫೋಟೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
Laxmi News 24×7