Breaking News

ನ್ಯಾಯಾಲಯ ಶುಲ್ಕ ಭರಿಸಲು ಒಡವೆ ಮಾರಿದೆ- ಲಂಡನ್ ಕೋರ್ಟ್‍ಗೆ ಅನಿಲ್ ಅಂಬಾನಿ ಹೇಳಿಕೆ

Spread the love

ಲಂಡನ್: ನ್ಯಾಯಾಲಯದ ಶುಲ್ಕ ಭರಿಸಲು ನನ್ನ ಬಳಿ ಇದ್ದ ಎಲ್ಲ ಆಭರಣಗಳನ್ನು ಮಾರಿದ್ದೇನೆ. ನನ್ನ ಖರ್ಚು ವೆಚ್ಚಗಳನ್ನು ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ ಎಂದು ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಹೇಳಿದ್ದಾರೆ.

ಲಂಡನ್ ಹೈಕೋರ್ಟ್‍ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಂಬಾನಿ ಹೇಳಿದ್ದಾರೆ. ಚೀನಾ ಮೂಲದ ಮೂರು ಬ್ಯಾಂಕ್‍ಗಳು ಲಂಡನ್‍ನಲ್ಲಿ ಅನಿಲ್ ಅಂಬಾನಿ ವಿರುದ್ಧ ಮೊಕದ್ದಮೆ ಹೂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಹೈ ಕೋರ್ಟ್ ವಿಚಾರಣೆ ನಡೆಸಿತು. ಈ ಹಿನ್ನೆಲೆ ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಸಹೋದರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರು.

ಖರ್ಚು, ವೆಚ್ಚಗಳನ್ನು ನನ್ನ ಪತ್ನಿ ಹಾಗೂ ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ. ತಾಯಿ ಹಾಗೂ ಮಗನಿಂದ ಸಾಲ ಪಡೆದಿದ್ದೇನೆ. ದುಬಾರಿ ಬೆಲೆಯ ಕಾರಿನಲ್ಲಿ ಓಡಾಡಿದ್ದೇನೆ ಎಂಬ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಜನವರಿ ಹಾಗೂ ಜೂನ್ 2020ರಲ್ಲಿ ಆಭರಣ ಮಾರಿದ ಬಳಿಕ 9.9 ಕೋಟಿ ಸಿಕ್ಕಿದೆ. ಅಲ್ಲದೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ಕೋರ್ಟ್ ವಿಚಾರಣೆ ನಡೆಸಿದ್ದು, ಖಾಸಗಿಯಾಗಿ ವಿಚಾರಣೆ ನಡೆಸುವ ಮನವಿಯನ್ನು ತಿರಸ್ಕರಿಸಲಾಗಿದೆ.

ಇಂಡಸ್ಟ್ರಿಯಲ್ ಆ್ಯಂಡ್ ಕಮರ್ಷಿಯಲ್ ಬ್ಯಾಂಕ್ ಆಫ್ ಚೀನಾ ಲಿ.ನ ಮುಂಬೈ ಶಾಖೆ, ಚೀನಾ ಡೆವಲಪ್‍ಮೆಂಟ್ ಬ್ಯಾಂಕ್ ಹಾಗೂ ಎಕ್ಸಿಮ್ ಬ್ಯಾಂಕ್ ಆಫ್ ಚೀನಾ ದಾಖಲಿಸಿರುವ ಸಾಲದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 22ರಂದು ವಿಚಾರಣೆ ನಡೆಸಿದ್ದ ಕೋರ್ಟ್, ಜೂನ್ 12ರೊಳಗೆ 5,821 ಕೋಟಿ ರೂ. ಪಾವತಿಸುವಂತೆ ಹಾಗೂ ಹೆಚ್ಚುವರಿಯಾಗಿ ನ್ಯಾಯಾಲಯದ ಶುಲ್ಕ 7 ಸಾವಿರ ಕೋಟಿ ರೂ.ಗಳನ್ನು ಪಾವತಿಸುವಂತೆ ಆದೇಶಿಸಿತ್ತು.


Spread the love

About Laxminews 24x7

Check Also

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Spread the loveವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ