Breaking News

ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ:ಶ್ರೀರಾಮುಲು

Spread the love

ಚಿತ್ರದುರ್ಗ: ನಾಡಿನ ಜನರು ಶ್ರೀರಾಮುಲುಗೆ ಒಳ್ಳೆಯದಾಗಬೇಕೆಂದು ಬಯಸುತ್ತಾರೆ. ಏನೇ ಸ್ಥಾನ ಕೊಟ್ಟರು ನಿಭಾಯಿಸುವ ಶಕ್ತಿ ಭಗವಂತ ನನಗೆ ನೀಡಿದ್ದಾನೆ. ಪಕ್ಷ ಯಾವ ತಿರ್ಮಾನ ಕೈಗೊಳ್ಳಲಿದೆ ಕಾದು ನೋಡುತ್ತೇನೆ ಅಂತ ಹೇಳುವ ಮೂಲಕ ಪರೋಕ್ಷವಾಗಿ ತಾವು ಡಿಸಿಎಂ ಸ್ಥಾನದ ಆಕಾಂಕ್ಷಿ ಎಂಬ ಸಂದೇಶದವನ್ನು ಸಚಿವ ಶ್ರೀರಾಮಲು ಪಕ್ಷಕ್ಕೆ ರವಾನಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ಪಟ್ಟಣದಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆ ಬಗ್ಗೆ ತಿರ್ಮಾನಿಸುತ್ತಾರೆ. ಹಾಗೆಯೇ ಬಿಎಸ್‍ವೈ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕಳಂಕ ತರುವ ಉದ್ದೇಶದಿಂದ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಇಲ್ಲಸಲ್ಲದ ಅರೋಪ ಮಾಡುತ್ತಿದ್ದಾರೆ. ವಿಧಾನಸಭೆ ಒಳಗಿಲ್ಲದವರ ಬಗ್ಗೆ ಚರ್ಚಿಸಿ ಭ್ರಷ್ಟಾಚಾರದ ಬಗ್ಗೆ ದ್ವನಿ ಎತ್ತಿದ್ದಾರೆ. ಆದ್ರೆ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ವಾಗ್ದಾಳಿ ನಡೆಸಿದರು.ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಶಿರಾ ಹಾಗು ರಾಜರಾಜೇಶ್ವರಿ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಉಪ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದು, ಗೆಲುವಿಗಾಗಿ ತಂತ್ರ ರೂಪಿಸಲಾಗಿದೆ ಹೀಗಾಗಿ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಚಿವರು ಭವಿಷ್ಯ ನುಡಿದರು.


Spread the love

About Laxminews 24x7

Check Also

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.

Spread the love ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ