Breaking News

ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ

Spread the love

ಬೆಳಗಾವಿ: ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ. 
ಈ ಬಗ್ಗೆ ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ ಜನರ ಜಾಗೃತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರೋ ಈ ರೀತಿ ಬೆದರಿಕೆಯೊಡ್ಡುತ್ತಿದ್ದಾರೆ ಅಂತಾ ಹೇಳಿದ್ದಾರೆ.
ಯಾರು ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಸಮಾಜದಲ್ಲಿ ನಿಜ ಹೇಳುವವರೆಗೆ ಈ ರೀತಿ ಸಮಸ್ಯೆ ಆಗುತ್ತದೆ. ಮೊದಲು ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಾರೆ. ಕುಗ್ಗದಿದ್ದಾಗ ದೈಹಿಕವಾಗಿ ಕುಗ್ಗಿಸಲು ಯತ್ನಿಸುತ್ತಾರೆ. ಈ ವಿಚಾರವಾಗಿ ಪೊಲೀಸರಿಗೂ ಮಾಹಿತಿ ನೀಡಿದ್ದೇನೆ. ಅವರು ಇಬ್ಬರು ಅಂಗರಕ್ಷಕರನ್ನು ನೀಡಿದ್ದಾರೆ. ನಿರಂತರವಾಗಿ ಪೊಲೀಸ್ ವರಿಷ್ಠಾಧಿಕಾರಿಗಳು, ಗೃಹಸಚಿವ ಬಸವರಾಜ ಬೊಮ್ಮಾಯಿ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ