Breaking News

ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ:

Spread the love

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ ಸಲಹೆ ನೀಡಲು ಮನವಿ ಮಾಡಿದ್ದೇನೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಮಧ್ಯೆ, ನನ್ನ ಪ್ರಕಾರ ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ ಎಂದು ಗಂಗಾವತಿಯಲ್ಲಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾತನಾಡಿರುವ ಅವರು ಸೋಂಕು ಕಡಿಮೆಯಾದ್ರೆ ಮಾತ್ರ ಶಾಲೆ ಆರಂಭಿಸಬೇಕು. ಅದು LKG ಇರಬಹುದು‌ PUC ಇರಬಹುದು ಎಂದು ಮುನವಳ್ಳಿ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಆರೋಗ್ಯವೇ ನಮಗೆ ಬಹಳ ಮುಖ್ಯ. ಆ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಕೆಲಸ ಮಾಡ್ತಾರೆ. ಎರಡು ಮೂರು ತಿಂಗಳು ನೋಡಿಕೊಂಡು ಮುಂದೆ ಯೋಚನೆ ಮಾಡಲಿ ಅನ್ನೋದು ನನ್ನ ಅಭಿಪ್ರಾಯ ಎಂದು ಪರಣ್ಣ ಮುನವಳ್ಳಿ ಹೇಳಿದ್ದಾರೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ