Breaking News

ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ

Spread the love

ಬೆಳಗಾವಿ: ಸಾಲಬಾಧೆ ಹಿನ್ನೆಲೆಯಲ್ಲಿ ವಿದ್ಯುತ್ ಮಗ್ಗದ ಮುಂದೆಯೇ ನೇಕಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ದೇವಾಂಗ ನಗರದಲ್ಲಿ ನಡೆದಿದೆ. ಸಂತೋಷ್ ಢಗೆ (39) ಆತ್ಮಹತ್ಯೆ ಮಾಡಿಕೊಂಡ ನೇಕಾರ.

ನೇಕಾರ ಸಂತೋಷ್ ಸಾಲ ಮಾಡಿ 2 ವಿದ್ಯುತ್ ಮಗ್ಗ ಖರೀದಿ ಮಾಡಿದ್ದ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟ ಎದುರಿಸಿದ್ದ. ಕುಟುಂಬ ನಿರ್ವಹಣೆ ಮಾಡಲಾಗದೇ, ಸಾಲ ತೀರಿಸಲಾಗದೆ ಸಾಲಗಾರರ ಕಾಟಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾನೆ.ಪತ್ನಿ, ಮಕ್ಕಳು ತವರು ಮನೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಸಂತೋಷ್​ಗೆ ಐದು ವರ್ಷದ ಗಂಡು ಮಗು ಹಾಗೂ ಮೂರು ವರ್ಷದ ಹೆಣ್ಣು ಮಗುವಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ