Breaking News

ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ.

Spread the love

ಮೋಳೆ: ಇಲ್ಲಿನ ಸ್ಮಶಾನದ ಪರಿಸರದಲ್ಲಿ ಬೆಳೆದಿದ್ದ ಮುಳ್ಳು ಮೊದಲಾದ ಕಳೆ ಗಿಡಗಳನ್ನು ತೆರವುಗೊಳಿಸುವ ಕಾಮಗಾರಿಗೆ ಗ್ರಾಮ ಪಂಚಾಯಿತಿಯಿಂದ ಚಾಲನೆ ನೀಡಲಾಗಿದೆ.

ಅಲ್ಲಿನ ಅವ್ಯವವ್ಥೆ ಕುರಿತು ‘ಪ್ರಜಾವಾಣಿ’ಯಲ್ಲಿ ‘ಸ್ಮಶಾನಕ್ಕೆ ದಾರಿ ಇಲ್ಲದೆ ತೊಂದರೆ’ ಶೀರ್ಷಿಕೆಯಲ್ಲಿ ಗುರುವಾರ ವರದಿ ಪ್ರಕಟವಾಗಿತ್ತು. ಇದರಿಂದ ಪರಿಣಾಮ ಪಿಡಿಒ ದಾನಮ್ಮ ಸಜ್ಜನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಂಚಾಯಿತಿ ಸಿಬ್ಬಂದಿಗೆ ಸೂಚನೆ ನೀಡಿ, ಜೆಸಿಬಿ ಯಂತ್ರದ ಸಹಾಯದಿಂದ ಮುಳ್ಳಿನ ಗಿಡ ಹಾಗೂ ಕಳೆ ಗಿಡಗಳನ್ನು ತೆರವುಗೊಳಿಸಿದ್ದಾರೆ. ರಾತ್ರಿ ವೇಳೆ ಶವ ಸಂಸ್ಕಾರಕ್ಕೆ ಅನುಕೂಲವಾಗಲೆಂದು ಬೆಳಕಿನ ವ್ಯವಸ್ಥೆಗಾಗಿ ವಿದ್ಯುತ್ ದೀಪಗಳನ್ನು ದುರಸ್ತಿ ಮಾಡಿಸಿದ್ದಾರೆ.

‘ಸದ್ಯ ಯಂತ್ರದ ಸಹಾಯದಿಂದ ಗಿಡಗಳನ್ನು ತೆರವುಗೊಳಿಸುತ್ತಿದ್ದೇವೆ.

ನಂತರ ಸಂಪೂರ್ಣ ಸ್ವಚ್ಛಗೊಳಿಸಲಾಗುವುದು. ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಂಪೌಂಡ್ ನಿರ್ಮಿಸಿ, ನೀರಿನ ವ್ಯವಸ್ಥೆಯನ್ನೂ ಮಾಡಲಾಗುವುದು’ ಎಂದು ಪಿಡಿಒ ತಿಳಿಸಿದರು.

ಸ್ಮಶಾನ ಸ್ವಚ್ಛಗೊಳ್ಳಲು ಕಾರಣವಾದ ಪತ್ರಿಕೆಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದರು.

ಸ್ಮಶಾನಕ್ಕೆ ದಾರಿ ಇಲ್ಲದೆ ತೊಂದರೆ


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ