ಬೆಳಗಾವಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಯುವ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು, ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡಲೆ ತಪ್ಪಿತಸ್ಥರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. ಸಂತ್ರಸ್ತೆಯ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷ ಮಹೇಶ ಶೀಗಿಹಳ್ಳಿ ನೇತೃತ್ವ ವಹಿಸಿದ್ದರು.
Laxmi News 24×7