Breaking News

ರಾತ್ರಿ ಜೊತೆಯಲ್ಲೇ ಪಾರ್ಟಿ ಮಾಡಿ ಕೊನೆಗೆ ಆತನನ್ನೆ ಕೊಲೆ ಮಾಡಿದ್ರು..

Spread the love

ಮಂಡ್ಯ: ರಾತ್ರಿ ಫುಲ್ ಪಾರ್ಟಿ ಮಾಡುತ್ತಿದ್ದಾಗ ಜತೆಯಲ್ಲಿದ್ದವರಿಂದಲೇ ಯುವಕನ ಹತ್ಯೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ನಡೆದಿದೆ. ಪೂರ್ಣಚಂದ್ರು(28) ಕೊಲೆಯಾದ ಯುವಕ.

ಕ್ರಷರ್​ನಲ್ಲಿ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರುನ ಸ್ನೇಹಿತರು ರಾತ್ರಿ ಫುಲ್ ಪಾರ್ಟಿ ಮಾಡಿ ಲಾಂಗು ಮಚ್ಚುಗಳಿಂದ ಹಲ್ಲೆಗೈದು ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ ಸ್ನೇಹಿತರಾದ ಜಕ್ಕನಹಳ್ಳಿಯ ಪ್ರದೀಪ್, ಚಾಮರಾಜು ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ