Breaking News

ಕಲ್ಯಾಣ್​ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್​ ಮೊರೆಹೋದ ಪ್ರೇಮಕವಿ ಪತ್ನಿ

Spread the love

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್‌ ಬಗ್ಗೆ ಪೊಲೀಸ್​ ಇನ್​ಸ್ಪೆಕ್ಟರ್​ ಶ್ರೀದೇವಿ ಪಾಟೀಲ್‌ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ.

ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 26ರಂದು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ಹೇಳಿದ್ದಾರೆ.

ಕೆ.ಕಲ್ಯಾಣ್ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ, ಕಲ್ಯಾಣ ವಿರುದ್ಧ ಅಶ್ವಿನಿ ಮಾಳಮಾರುತಿ ಠಾಣೆಗೆ ದೂರು ಸಹ ನೀಡಿದ್ರು. ಜೂನ್ 26ರಂದು ದೂರು ನೀಡಿದ್ರೂ ಈ ಕುರಿತು ಪೊಲೀಸರು ವಿಚಾರಣೆ ನಡೆಸಿಲ್ಲ. ಆದ್ರೆ ಕೆ‌.ಕಲ್ಯಾಣ ನೀಡಿದ್ದ ದೂರನ್ನು ಸ್ವೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗ ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ಅಶ್ವಿನಿಯವರ ಸೋದರ ಸಂಬಂಧಿ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ