Breaking News

ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿ……

Spread the love

ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವರಶೀಗಿಹಳ್ಳಿ ಹೊರವಲಯದಲ್ಲಿ ಹುಲ್ಲಿನ ಹೊರೆ ಹೊತ್ತು ಹೋಗುತ್ತಿದ್ದ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪದ ಮೇಲೆ ಮೂವರನ್ನು ಕಿತ್ತೂರು ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ದೇವರಶೀಗಿಹಳ್ಳಿ ಗ್ರಾಮದ ನಾಗೇಶ ದೊಡಮನಿ, ವಿಜಯ ಮದನಬಾವಿ ಮತ್ತು ಚೇತನ ಹಿರೇಮಠ ಬಂಧಿತರು. ಅವರಿಂದ, ಕಳವು ಮಾಡಿದ್ದ ₹ 1.40 ಲಕ್ಷ ಮೌಲ್ಯದ 35 ಗ್ರಾಂ. ತೂಕದ ಚಿನ್ನದ ಸರ, ದ್ವಿಚಕ್ರ ವಾಹನ, ₹ 10 ಸಾವಿರ, 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನ್ನಿಂದ ಸೆ.23ರಂದು ಸರ ಕಿತ್ತುಕೊಂಡು ಹೋಗ ಬಗ್ಗೆ ರಾಮನಗೌಡ ಪಾಟೀಲ ದೂರು ನೀಡಿದ್ದರು. ಸಿಪಿಐ ಮಂಜುನಾಥ ಕುಸುಗಲ್, ಪಿಎಸ್‌ಐ ಎಸ್.ಬಿ.

ಮಾವಿನಕಟ್ಟಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ತಂಡವನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಶಂಸಿಸಿದ್ದಾರೆ.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ