Breaking News

ಪವರ್ ಟಿವಿ ಕ್ಯಾಮೆರಾಮೆನ್ ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ನಲ್ಲಿ ಮೃತ ಪಟ್ಟಿದ್ದಾರೆ

Spread the love

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29), ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್’ನಲ್ಲಿ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಿಸಲಾಗಿತ್ತು.

ಸುನೀಲ‌ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ವೈದ್ಯರು ಸಾಕಷ್ಟು ಪ್ರಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ