Breaking News

ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ

Spread the love

ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್​ ಇನಾಮದಾರ್​, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್​ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನು ರಾಯಚೂರಿನ ಸದರ್​​ ಬಜಾರ್​​ ಪೊಲೀಸರು ಅಶೋಕ್​​ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಜಿಲಾನಿ, ಖದೀರ್​ ಪಾಷಾ, ಮೊಹಮ್ಮದ್​​​ ಖಾಲೀದ್, ಅನ್ಸರ್​ ಮೊಹಮ್ಮದ್ ಬಂಧಿತರು. ಬಂಧಿತರಿಂದ 10,300 ರೂಪಾಯಿ‌, ಮೊಬೈಲ್ ಜಪ್ತಿ ಮಾಡಲಾಗಿದೆ. ಸದರ್​ ಬಜಾರ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ