Breaking News

ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?

Spread the love

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ.

ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಜಗಳೂರು ಪೊಲೀಸರು ದೂರು ದಾಖಲಿಸಿಕೊಂಡು 23 ವರ್ಷದ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ