Breaking News

ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬಾಗಲಕೋಟೆ: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಆನಂದ್ (23), ಅಕ್ಷತಾ (15) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ.

ಮೃತ ಪ್ರೇಮಿಗಳು ಮೂಲತಃ ಬಾಗಲಕೊಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಆನಂದ್ ಹಾಗೂ ಅಕ್ಷತಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಂತರ್ಜಾತಿ ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂದು ಮನನೊಂದು ಪ್ರೇಮಿಗಳು ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ

ಮೃತ ಆನಂದ್ ಯುವಕ ಬೇಕರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಗುತ್ತಿದ್ದ.ಹೀಗಾಗಿ ಮುಧೋಳದಲ್ಲಿ ನಗರದಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ, ಇಂದು ಬೆಳಿಗ್ಗೆ ಅದೇ ಕೋಣೆಯಲ್ಲೇ ಆನಂದ್ ಹಾಗೂ ಅಕ್ಷತಾ ನೇಣಿಗೆ ಕೊರಳೊಡ್ಡಿದ್ದಾರೆ. ಈ ಸಂಬಂಧ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ