https://www.facebook.com/105350550949710/videos/756737581723043/?sfnsn=wiwspmo
ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು ನಡೆದಿವೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಕರಣ ಹೊಣೆ ಹೊತ್ತುಕೊಳ್ಳಬೇಕು. ಕಾಮುಕರಿಗೆ ತಕ್ಷಣ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಹೋರಾಟಗಳು ನಡೆಸಲಾಗುವುದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ ಅವರ ಪುತ್ರಿ, ಪ್ರಿಯಾಂಕಾ ಪುತ್ರ ರಾಹುಲ್, ವಿವೇಕ ಜತ್ತಿ, ರಿಯಾಜ್ ಚೌಗಲಾ, ರಾಮಣ್ಣಾ ಗುಳ್ಳಿ, ಪ್ರಕಾಶ ಡಾಂಗೆ, ಕಾಂಗ್ರೆಸ್ ಮುಖಂಡರಾದ ಜಯಶ್ರೀ ಮಾಳಗಿ, ಆಯಿಶಾ ಸನದಿ ಸೇರಿದಂತೆ ಮುಂತಾದವರು ಇದ್ದರು.