Breaking News

ಸಿದ್ದರಾಮಯ್ಯ ಮನೆ ಮೇಲೆ ಏಕೆ ಸಿಬಿಐ ದಾಳಿ ಆಗಿಲ್ಲ?: ಉಮೇಶ್ ಕತ್ತಿ

Spread the love

ಚಿಕ್ಕೋಡಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿಯ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮಾಡುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂಬುವುದು ಸುಳ್ಳು.

ರಾಜಕೀಯ ದುರದ್ದೇಶದಿಂದ ದಾಳಿ ಆಗಿದ್ದರೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಏಕೆ ದಾಳಿ ಆಗಿಲ್ಲ ಎಂದು ಮರುಪ್ರಶ್ನಿಸಿದರುಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಉಮೇಶ್ ಕತ್ತಿ ಅವರು, ಈಗಾಗಲೇ ನಾನು 13 ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದು, ಯುವಕರಿಗೆ ಹೊಸಬರಿಗೆ ಅವಕಾಶ ನೀಡಿದರೆ ತಪ್ಪಿಲ್ಲ. ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೆ ಬಿಟ್ಟರೆ ತಪ್ಪಲ್ಲ. ನಾನು ಹಿರಿಯ ನಾಯಕನಾಗಿ, ಶಾಸಕ ಕೆಲಸ ಮಾಡುತ್ತೇನೆ ಎಂದರು


Spread the love

About Laxminews 24x7

Check Also

ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ

Spread the loveಬೆಳಗಾವಿ: ಆಹಾರ ಪದಾರ್ಥಗಳಿಗೆ ರಾಸಾಯನಿಕ ಬಳಸುತ್ತಿರುವುದರಿಂದ ಹಲವು  ರೋಗ ಬರುತ್ತಿವೆ. ಮುಖ್ಯವಾಗಿ ಕ್ಯಾನ್ಸರ್‌ನಂತಹ ಮಾರಕ ರೋಗ ದಿನದಿಂದ ದಿನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ