ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ನೀಡಿದೆ.
ತಮ್ಮ ಮನೆಯಲ್ಲಿ ಯಾವುದೇ ನಗದು ಸಿಕ್ಕಿಲ್ಲ ಎಂದು ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳುತ್ತಿರುವ ಸಂದರ್ಭದಲ್ಲೇ ಸಿಬಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
14 ಕಡೆಗಳಲ್ಲಿ ದಾಳಿ ಮಾಡಲಾಗಿದೆ. 74.93 ಕೋಟಿ ರೂ. ಅಕ್ರಮ ಆಸ್ತಿ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಬ ಸಿಬಿಐ ತಿಳಿಸಿದೆ.
Laxmi News 24×7