Breaking News

ಬೆಳಗಾವಿ ಮಹಾನಗರದಲ್ಲಿ ಬುಧವಾರದಿಂದ ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯ

Spread the love

ಬೆಳಗಾವಿ – ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ.

ಈ ನಿಯಮವನ್ನು ಬೆಳಗಾವಿ ಮಹಾನಗರದಲ್ಲಿ ಬುಧವಾರ (7-10-2020) ದಿಂದ ಜಾರಿಗೊಳಿಸಲು ಪೊಲೀಸ್ ಆಯುಕ್ತಾಲಯ ನಿರ್ಧರಿಸಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಬುಧವಾರದಿಂದ ಮಾಸ್ಕ್ ಧರಿಸದೆ ಹೊರಗೆ ಹೋದಲ್ಲಿ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯವಾಗಲಿದೆ. ಹಾಗಾಗಿ ಮನೆಯಿಂದ ಹೊರಡುವ ಮುನ್ನ ಸರಿಯಾಗಿ ಪರಿಶೀಲಿಸಿಕೊಳ್ಳಿ. ಮಾರ್ಗ ಮಧ್ಯೆ ಒಂದು ಮಾಸ್ಕ್ ಬಿದ್ದು ಹೊದಲ್ಲಿ ಬಳಸಿಕೊಳ್ಳಲು ಇನ್ನೊಂದನ್ನು ರಿಸರ್ವ್ ಇಟ್ಟುಕೊಳ್ಳುವುದೂ ಒಳ್ಳೆಯದೇ.


Spread the love

About Laxminews 24x7

Check Also

ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ

Spread the love ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ