Breaking News

ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ

Spread the love

ಬೆಂಗಳೂರು: ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ.

ಮೇಕ್ರಿ ಸರ್ಕಲ್ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದ್ದು, ಅವಘಡ ತಪ್ಪಿದಂತಾಗಿದೆ. ಹೊಸ ಕಾರನ್ನು ಓಡಿಸುತ್ತಿದ್ದ ವೇಳೆ ಅಂಡರ್ ಪಾಸ್‍ನಲ್ಲಿ ಇದ್ದಕ್ಕಿದ್ದಂತೆ ಕಾರಿನ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಮೇಲೆ ಹತ್ತಿದೆ.ಈ ಅವಘಡದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದ ಕಾರನ್ನು ಡಿವೈಡರ್‌ನಿಂದ ಕೆಳಗಿಳಿಸಿದ್ದಾರೆ. ಈ ಕುರಿತು ಸದಾಶಿವನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ