ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್ ಜಾರಿಯಾಗಿದೆ.
ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನಗಳಲ್ಲಿ ಸಿಬಿಐ ವಿಚಾರಣೆ ಎದುರಿಸಲಿದ್ದಾರೆ.
Laxmi News 24×7