Breaking News

ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ

Spread the love

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ