Breaking News

ಖಾಸಗಿ ದರ್ಬಾರ್ ಗೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ನಿರ್ಬಂಧ

Spread the love

ಮೈಸೂರು, ಅ. 7- ದಸರಾ ಹಿನ್ನೆಲೆಯಲ್ಲಿ ಮೈಸೂರು ರಾಜವಂಶಸ್ಥರು ಅರಮನೆಯಲ್ಲಿ 10 ದಿನಗಳ ಕಾಲ ಧಾರ್ಮಿಕ ಪೂಜಾ ಕೈಂಕರ್ಯ ಕೈಗೊಳ್ಳಲಿದ್ದು, ಕೋವಿಡ್ ಕಾರಣ ಕುಟುಂಬದ ಸದಸ್ಯರು ಒಳಗೊಂಡಂತೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ಈ ಬಾರಿ ಪ್ರವೇಶ ನಿರ್ಬಂಸಲಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದ್ದಾರೆ.

ಈ ವರ್ಷ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯ ನಡೆಯಲಿದೆ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.ಶರನ್ನವರಾತ್ರಿ ಆಚರಣೆ ಪ್ರಯುಕ್ತ ಅರಮನೆಯಲ್ಲಿ ಸಂಪ್ರದಾಯದಂತೆ ಖಾಸಗಿ ದರ್ಬಾರ್ ನಡೆಸಲು ಸಿದ್ಧತೆಗಳು ನಡೆಯುತ್ತಿದೆ.

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಮಾರ್ಗದರ್ಶನದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಸರಾ ವೇಳೆ ಪೂಜಾ ಕೈಂಕರ್ಯ ನೆರವೇರಿಸಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ