Breaking News

ನೆಲಮಂಗಲ ಬಳಿ ಕಂಟೈನರ್ ಲಾರಿ ಪಲ್ಟಿ- ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

Spread the love

ಬೆಂಗಳೂರು: ಬೃಹತ್ ಕಂಟೈನರ್ ಲಾರಿ ಪಲ್ಟಿಯಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಬಳಿ ನಡೆದಿದೆ.

ನೆಲಮಂಗಲ ತಾಲೂಕಿನ ಎಡೆಹಳ್ಳಿ ಸಮೀಪ ಬೃಹತ್ ಕಂಟೈನರ್ ಲಾರಿಯೊಂದು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಸುಮಾರು 5 ಗಂಟೆ ಹೊತ್ತಿಗೆ ಕಂಟೈನರ್ ಪಲ್ಟಿಯಾಗಿದ್ದು, ಬರೋಬ್ಬರಿ 20 ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಇದರಿಂದಾಗಿ ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.ಕೈಗಾರಿಕಾ ಪ್ರದೇಶದಿಂದ ತುಮಕೂರು ಮಾರ್ಗವಾಗಿ ಹೋಗುವ ಸಂದರ್ಭದಲ್ಲಿ ಕಂಟೈನರ್ ಪಲ್ಟಿಯಾಗಿದೆ.

ನಂತರ ಪೊಲೀಸರು ಆಗಮಿಸಿ ರಾಷ್ಟ್ರೀಯಲ್ಲಿ ಪಲ್ಟಿಯಾಗಿದ್ದ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಹಾನಿ ಸಂಭವಿಸಿಲ್ಲ. ಲಾರಿ ಚಾಲಕ ಸಹ ಬಚಾವ್ ಆಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Spread the loveಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ