Breaking News

ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

Spread the love

ನವದೆಹಲಿ: ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದರು.

ದೆಹಲಿಯಲ್ಲಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು.

ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು ಪಾಸ್ವಾನ್‌ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಗುರುವಾರ ನಿಧನರಾದರು.

ಸುಮಾರು 50 ವರ್ಷಗಳ ರಾಜಕೀಯ ಜೀವನದಲ್ಲಿ ರಾಮ್‌ ವಿಲಾಸ್ ಪಾಸ್ವಾನ್‌ ಅವರು ದೇಶದ ಪ್ರಮುಖ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು.

 


Spread the love

About Laxminews 24x7

Check Also

ಧರ್ಮಸ್ಥಳದಲ್ಲಿ ಬಹು ಕೊಲೆ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

Spread the loveಬೆಂಗಳೂರು: “ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ನೂರಾರು ಕೊಲೆಗಳು, ಅತ್ಯಾಚಾರಗಳು ಆಧಾರರಹಿತ ಮತ್ತು ಸುಳ್ಳು” ಎಂದು ಧರ್ಮಸ್ಥಳ ಮಂಜುನಾಥ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ