Breaking News

ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..

Spread the love

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.

ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್​ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಮಣಿಯರ ದಿನನಿತ್ಯದ ಜಡೆಜಗಳದಿಂದ ಅಲ್ಲಿನ ಸಿಬ್ಬಂದಿ ಹಾಗೂ ಇತರೆ ಕೈದಿಗಳು ರೋಸಿಹೋಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಇವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವುದು ಜೈಲಿನಲ್ಲಿರುವವರಿಗೆ ಮತ್ತಷ್ಟು ತಲೆನೋವು ತಂದುಕೊಡಬಹುದು.


Spread the love

About Laxminews 24x7

Check Also

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆ

Spread the loveಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ  ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ