ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಜಿಲ್ಲೆಯ ಗುಡ್ಡದರಂಗವ್ವನಹಳ್ಳಿ ಬಳಿ ಚಿರತೆಯೊಂದು ಸಾವನ್ನಪ್ಪಿದೆ. ಏಳು ತಿಂಗಳ ಹೆಣ್ಣು ಚಿರತೆ ರಸ್ತೆ ದಾಟುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆ ನಡೆದ ಕೂಡಲೇ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.
ಇತ್ತ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಿಡಾಡಿ ದನಗಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಓಡಾಡುತ್ತಿದ್ದ 6 ಬಿಡಾಡಿ ದನಗಳು ಸಾವನ್ನಪ್ಪಿದೆ.
Laxmi News 24×7