Breaking News

ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮಧ್ಯಂತರ ರಜೆಯನ್ನು ಘೋಷಿಸಿದ ಬಿಎಸ್‌ವೈ

Spread the love

ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

 

ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ