Breaking News

ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ

Spread the love

ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಇಲ್ಲಿಯವರೆಗೆ ಕೆಲಸ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ

ಅ. 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ಈ ರೀತಿಯ ಆದೇಶಗಳನ್ನು ಜಾರಿ ಮಾಡುವುದು ಸರಿಯಲ್ಲ. ಹರ ಮುನಿದರೂ ಗುರು ಕಾಯ್ವನು ಎಂಬುದನ್ನು ಸರ್ಕಾರ ಮರೆಯಬಾರದು. ಈ ಕೂಡಲೇ ಸರ್ಕಾರ, ಮಧ್ಯಂತರ ರಜಾ ರದ್ದು ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ