Breaking News

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

Spread the love

ಬೆಳಗಾವಿ: ಜಿಲ್ಲೆಯಲ್ಲಿ ವರ್ಷಧಾರೆ ನರ್ತನ ಜೋರಾಗಿದ್ದು, ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ರಣಭೀಕರ ಮಳೆಗೆ ಹುಕ್ಕೇರಿಯಲ್ಲಿ ವ್ಯಕ್ತಿ ಬಲಿಯಾಗಿದ್ದಾರೆ. ಹಾಗೂ ಅನೇಕ ಮನೆಗಳು ಕುಸಿದಿವೆ.

ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಗ್ಯಾರೇಜ್ ಛಾವಣಿ ಕುಸಿದು ಅಸ್ಲಂ ಅಲ್ಲಾಖಾನ (52) ಎಂಬುವವರು ಮೃತಪಟ್ಟಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಳೆಯ ಅವಾಂತರಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. 5 ಮನೆಗಳು ಧರೆಗುರುಳಿದ್ದು, ಪಿಡಬ್ಲ್ಯುಡಿ ಇಲಾಖೆಯ ಕಚೇರಿ ಕಾಂಪೌಂಡ್ ಗೋಡೆ ಸೇರಿದಂತೆ 10ಕ್ಕೂ ಹೆಚ್ಚು ಮನೆಗೋಡೆ ಕುಸಿದಿದೆ.

 

ಇನ್ನು ವಿದ್ಯುತ್ ಕಂಬಗಳು ನೆಲಕ್ಕುರುಳಿದ ಹಿನ್ನೆಲೆಯಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿ ತಗ್ಗು ಪ್ರದೇಶದಲ್ಲಿ ನಿಂತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ