Breaking News

ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ತೆರಳಲಿದ್ದಾರೆ.

Spread the love

ಬೆಂಗಳೂರು: ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ  ಅನುಮತಿ ಪಡೆಯಲು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ತೆರಳಲಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು.

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ‌ ಕಾರ್ಯ ನಿರ್ವಹಿಸುತ್ತಿರುವ ಕಾಡಾ ಹಾಗೂ ವಾಲ್ಮಿ ಸಂಸ್ಥೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆಧುನಿಕ ಮತ್ತು ಸಾವಯವ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು‌ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ