ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್ಗಳು ಪತ್ತೆಯಾಗಿವೆ.
ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್ ಇರುವುದು ಗೊತ್ತಾಗಿದೆ.ಬಾಕ್ಸ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್ಗಳು ಪತ್ತೆಯಾಗಿವೆ.
ಬರೋಬ್ಬರಿ 23.97 ಲಕ್ಷ ಮೌಲ್ಯದ 1,59,800 ಸಿಗರೇಟು ಪತ್ತೆಯಾಗಿವೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಮಾಲ್ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.
Laxmi News 24×7