Breaking News

7 ಬಾರಿಯ ಸಂಸದ ಕೆ.ಹೆಚ್. ಮುನಿಯಪ್ಪ ರಾಜ್ಯ ರಾಜಕಾರಣಕ್ಕೆ? ಕ್ಷೇತ್ರ ಯಾವುದು?

Spread the love

ಕೋಲಾರ: ನಿರಂತರವಾಗಿ 1991ರಿಂದ ಕಾಂಗ್ರೆಸ್​ ಪಕ್ಷದ ವತಿಯಿಂದ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿರುವ ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಪರಾಜಯಗೊಂಡ ಕೆ.ಹೆಚ್. ಮುನಿಯಪ್ಪ ಇದೀಗ ರಾಜ್ಯ ರಾಜಕಾರಣಕ್ಕೆ ಬರಲು ಒಲವು ತೋರಿದ್ದಾರೆ ಎನ್ನುತ್ತಿವೆ ಪಕ್ಷದ ಮೂಲಗಳು.

ಕ್ಷೇತ್ರ ಯಾವುದು, ಡಿಕೆಶಿ ಮಾಸ್ಟರ್ ಪ್ಲ್ಯಾನ್​ ಏನು?
 ಕೇಂದ್ರದ ಮಾಜಿ ಸಚಿವ, 72 ವರ್ಷದ ಕೆ.ಎಚ್. ಮುನಿಯಪ್ಪ ರಾಜ್ಯ ರಾಜಕಾರಣದತ್ತ ಮರಳಲು ಕೆಪಿಸಿಸಿ ಅಧ್ಯಕ್ಷ್ಯ ಡಿಕೆ ಶಿವಕುಮಾರ್ ಒತ್ತಾಯ ಕಾರಣ ಎನ್ನಲಾಗಿದೆ.

ಮುಳಬಾಗಿಲು ಕ್ಷೇತ್ರದಿಂದ ಕಣಕ್ಕಿಳಿಯುವ ಇಂಗಿತ
 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಮಾಸ್ಟರ್ ಪ್ಲಾನ್ ಹೊಂದಿದ್ದಾರೆ. ಈ ಹಿನ್ನೆಲೆ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೆ.ಎಚ್.ಮುನಿಯಪ್ಪರಿಗೆ ಡಿಕೆಶಿ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಾಗಾಗಿ ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಸ್ಪರ್ಧಿಸಲು ಸಿದ್ದ ಎಂದು ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಹಾಗೇನಾದರೂ ಕಣಕ್ಕೆ ಇಳಿಯುವುದೇ ಆದ್ರೆ ಅದು ಜಿಲ್ಲೆಯ ಮುಳಬಾಗಿಲು ಕ್ಷೇತ್ರದಿಂದ ಎಂದೂ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ