Breaking News

ಧಾರಾಕಾರ ಮಳೆಗೆ ಎಲ್ಲವೂ ಹಾನಿ.. ಜನಜೀವನ ಅಸ್ತವ್ಯಸ್ತ

Spread the love

ವಿಜಯಪುರ: ಧಾರಾಕಾರ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ನದಿತೀರದ ಉಕುಮನಾಳ, ಸಾರವಾಡದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ತಾಳಿಕೋಟೆ ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಟ್ ಆಗಿದೆ. ತಾಳಿಕೋಟೆ ಬಳಿಯ ಹನುಮಾನ್ ಮಂದಿರ ನೀರಿನಲ್ಲಿ ಮುಳುಗಿದೆ.

ಕಟಾವಿಗೆ ಬಂದಿದ್ದ ಕಬ್ಬು ನಾಶ:
ಇನ್ನು ನದಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಜಲಾವೃತಗೊಂಡಿದೆ.

ಗದ್ದೆಗಳಲ್ಲಿ ನೀರು ನಿಂತಿರುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಮೂರು‌ ದಿನಗಳಿಂದ ‌ಸುರಿಯುತ್ತಿರುವ ಮಳೆಗೆ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ನೆಲ ಕಚ್ಚಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿದ ಕಬ್ಬು ಹಾಳಾಗಿದೆ.

ಮೋರಟಗಿ ಗ್ರಾಮ, ನಿಡಗುಂದಿ ಪಟ್ಟಣದ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿದ ಕಾರಣ ಮನೆಯಲ್ಲಿನ ದವಸಧಾನ್ಯ, ವಸ್ತುಗಳು ಹಾನಿಯಾಗಿವೆ. ಅಪಾರ ಪ್ರಮಾಣದ ವಸ್ತುಗಳು ನೀರುಪಾಲಾಗಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಇಷ್ಟೆಲ್ಲಾ ಆದ್ರೂ ಅಧಿಕಾರಿಗಳ್ಯಾರು ಸ್ಥಳಕ್ಕೆ ಬಂದಿಲ್ಲ, ನಮ್ಮ ಬಗ್ಗೆ ವಿಚಾರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ