Breaking News

ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

Spread the love

ದಾವಣಗೆರೆ: ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಜಗಳೂರು ತಾಲೂಕಿನ ಅಶ್ವತ್ಥರೆಡ್ಡಿ ನಗರ ಸಮೀಪದ ಬಿದರಕೆರೆ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಎಗ್​ರೈಸ್ ವ್ಯಾಪಾರಿ ಬಸವರಾಜ(45) ಭೀಕರವಾಗಿ ಕೊಲೆಯಾದವ. ಗೋಪಗೊಂಡನಹಳ್ಳಿ ಸಮೀಪದಲ್ಲಿರುವ ಹೊಲಕ್ಕೆಂದು ಬುಧವಾರ ಬೆಳಗಿನ ಜಾವ ಬಸವರಾಜ ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಾಯುವಿಹಾರಕ್ಕೆ ಹೋದ ಸಾರ್ವಜನಿಕರು ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಿಪಿಐ ದುರ್ಗಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶವದ ಪಕ್ಕದಲ್ಲಿ ವಾಹನ ಚಾಲಕರು ಧರಿಸುವ ಖಾಕಿ ಮೇಲಂಗಿ ಪತ್ತೆಯಾಗಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ