Breaking News

ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?

Spread the love

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು.

ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ

 ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂ‌ಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು.

ಇದೇ ಮೊದಲ‌ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ.

ನಂದಿ ಗಿರಿಧಾಮದ ಪ್ರಾಕೃತಿಕ ಸೊಬಗು ಸೌಂದರ್ಯ ಕಂಡು ನನಗೆ ಬಹಳ ಸಂತೋಷವಾಗಿದೆ. ನಂದಿ ಗಿರಿಧಾಮವನ್ನ ಮತ್ತಷ್ಟು ಅಭಿವೃದ್ದಿ ಮಾಡುತ್ತೇನೆ. ಆದ್ರೆ ಯಾವುದೇ ಕಾರಣಕ್ಕೂ ನಂದಿ ಗಿರಿಧಾಮವನ್ನ ಪ್ರವಾಸೋದ್ಯಮ ಇಲಾಖೆಗೆ ಬಿಟ್ಟುಕೊಡುವುದಿಲ್ಲ ಅಂತಾ ಸ್ಪಷ್ಟಪಡಿಸಿದರು.

ಗಿರಿಧಾಮವನ್ನ ಇಲಾಖೆಯಲ್ಲೇ ಉಳಿಸಿಕೊಂಡು ಅಭಿವೃದ್ಧಿ ಪಡಿಸುತ್ತೇವೆ
ತೋಟಗಾರಿಕಾ ಇಲಾಖಾ ಅಧೀನದಲ್ಲಿರುವ ವಿಶ್ವವಿಖ್ಯಾತ ನಂದಿ ಗಿರಿಧಾಮ ಹಾಗೂ ಕೆಮ್ಮಣ್ಣುಗುಂಡಿಯನ್ನ ಪ್ರವಾಸೋದ್ಯಮ ಇಲಾಖೆಗೆ ನೀಡುವಂತೆ ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಸಲಾಗಿದ್ದ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮೌಖಿಕ ಆದೇಶ ನೀಡಿದ್ದರು.

ಆದರೆ ನಂದಿ ಗಿರಿಧಾಮವನ್ನ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ ಮಾಡುವುದಕ್ಕೆ ಹಲವು ಪರಿಸರವಾದಿಗಳು, ಸ್ಥಳೀಯ ಜನ ಹಾಗೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂದು ಸಹ ಕೆಲ‌ ಸಂಘಟನೆಯವರು ಹಾಗೂ ಸ್ಥಳೀಯರು ಸಚಿವರನ್ನ ಭೇಟಿ ಮಾಡಿ ಹಸ್ತಾಂತರ ಮಾಡದಂತೆ ಆಗ್ರಹಿಸಿದ್ರು.

ಇದೇ ವಿಚಾರವಾಗಿ ಮಾತನಾಡಿದ ಸಚಿವರು ಸಹ ಯಾವುದೇ ಕಾರಣಕ್ಕೂ ನಂದಿ ಗಿರಿಧಾಮ ಹಾಗೂ ಕೆಮ್ಮಣ್ಣುಗುಂಡಿಯನ್ನ ಪ್ರವಾಸೋದ್ಯಮ‌ ಇಲಾಖೆಗೆ ಹಸ್ತಾಂತರ ಮಾಡುವುದಿಲ್ಲ.

ನಾವೇ ಅಭಿವೃದ್ದಿ ಮಾಡುತ್ತೇವೆ. ನಂದಿ ಗಿರಿಧಾಮ ಔಷಧಿ ಗುಣಗಳುಳ್ಳ ಸಸ್ಯ ಪ್ರಭೇದ ಇರುವ ತಾಣ. ಇದೊಂದು ಆರೋಗ್ಯಧಾಮ ಕೂಡ. ಹೀಗಾಗಿ ನಂದಿ ಗಿರಿಧಾಮವನ್ನ ತೋಟಗಾರಿಕಾ ಇಲಾಖೆಯಲ್ಲೇ ಉಳಿಸಿಕೊಂಡು ಅಭಿವೃದ್ಧಿ ಪಡಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ